ನರೇಂದ್ರ ಮೋದಿ ಇಂದಿನಿಂದ ಮೂರು ದಿನ ಫಿಲಿಫೈನ್ಸ್ ಪ್ರವಾಸ ಕೈಗೊಂಡಿದ್ದಾರೆ. 12ನೇ ಏಷಿಯನ್ ಶೃಂಗ ಸಭೆಯಲ್ಲಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ.
ನವದೆಹಲಿ(ನ.12): ನರೇಂದ್ರ ಮೋದಿ ಇಂದಿನಿಂದ ಮೂರು ದಿನ ಫಿಲಿಫೈನ್ಸ್ ಪ್ರವಾಸ ಕೈಗೊಂಡಿದ್ದಾರೆ. 12ನೇ ಏಷಿಯನ್ ಶೃಂಗ ಸಭೆಯಲ್ಲಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ.
ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಲು ತಾವು ಫಿಲಿಫೈನ್ಸ್ ಗೆ ಭೇಟಿ ನೀಡುತ್ತಿರುವುದು ಆಸಿಯಾನ್ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಬದ್ಧತೆಯನ್ನು ತೋರಿಸುತ್ತಿದೆ ಎಂದು ಫಿಲಿಫೈನ್ಸ್ ಗೆ ತೆರಳುವ ಮುನ್ನವೇ ಪ್ರಧಾನಿ ಹೇಳಿಕೊಂಡಿದ್ದಾರೆ. ಮೂರು ದಿನಗಳ ಭೇಟಿಯಲ್ಲಿ ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುವುದರ ಹೊರತಾಗಿ ಆಸಿಯಾನ್ ಶೃಂಗಸಭೆಯ 50ನೇ ವಾರ್ಷಿಕೋತ್ಸವದಲ್ಲಿ, ಸ್ಥಳೀಯ ಸಮಗ್ರ ಆರ್ಥಿಕ ಸಹಭಾಗಿತ್ವ ನಾಯಕರ ಸಭೆಯಲ್ಲಿ ಮತ್ತು ಆಸಿಯಾನ್ ಆರ್ಥಿಕ ಮತ್ತು ಹೂಡಿಕೆ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜತೆ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
