ನವದೆಹಲಿ[ಮಾ.07]: ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ಗೆ ತೆರಳಿ, ಅಲ್ಲಿನ ಸ್ವಚ್ಛತಾ ಸಿಬ್ಬಂದಿಗಳ ಕಾಲು ತೊಳೆದು ಸುದ್ದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಅದೇ ಸಿಬ್ಬಂದಿಗಳ ಕಲ್ಯಾಣ ನಿಧಿಗೆ 21 ಲಕ್ಷ ರು. ದೇಣಿಗೆ ನೀಡಿದ್ದಾರೆ.

ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಪ್ರಧಾನಿ ಮೋದಿ!

ಪ್ರಧಾನಿ ತಮ್ಮ ವೈಯಕ್ತಿಕ ಉಳಿತಾಯ ಖಾತೆಯಿಂದ ಈ ಹಣ ನೀಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ. ಇದೇ ವೇಳೆ ಬುಧವಾರಕ್ಕೆ ಸಂಪನ್ನಗೊಂಡ ಕುಂಭಮೇಳದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಭಕ್ತರು ಮತ್ತು ಸಂತರಿಗೆ ಕುಂಭಮೇಳದ ಯಶಸ್ಸಿಗೆ ಸಹಕರಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.