ಪಾಕ್ ಪ್ರಧಾನಿ ಇಮ್ರಾನ್ ಗೆ ಮೋದಿ ಪತ್ರ! ಪತ್ರ ಮುಖೇನ ಶುಭಾಶಯ ತಿಳಿಸಿದ ಮೋದಿ! ರಚನಾತ್ಮಕ ಮಾತುಕತೆಗೆ ಭಾರತ ಸಿದ್ದ ಎಂದ ಮೋದಿ! ಶಾಂತಿ ಸ್ಥಾಪನೆಗೆ ಭಾರತದ ಬದ್ದತೆ ಪ್ರಶ್ನಾತೀತ 

ನವದೆಹಲಿ(ಆ.20): ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ಇಮ್ರಾನ್ ಖಾನ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಶುಭಾಶಯ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಭಾರತ, ಪಾಕಿಸ್ತಾನದೊಂದಿಗೆ ರಚನಾತ್ಮಕ ಮತ್ತು ಅರ್ಥಪೂರ್ಣ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ನೆರೆಯ ರಾಷ್ಟ್ರ ಪಾಕಿಸ್ತಾನದೊಂದಿಗೆ ಶಾಂತಿ ಕಾಯ್ದುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆ ಮುಕ್ತ ದಕ್ಷಿಣ ಏಷ್ಯಾಗಾಗಿ ನಾವು ಕೆಲಸಮಾಡಬೇಕಾದ ಅಗತ್ಯ ಇದ್ದು, ಈ ನಿಟ್ಟಿನಲ್ಲಿ ಇಮ್ರಾನ್ ಖಾನ್ ಕೂಡ ಜೊತೆಗೂಡಲಿದ್ದಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಕ್ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಳಿಕ ಮಾತನಾಡಿದ್ದ ಇಮ್ರಾನ್, ಶಾಂತಿ ಮಾತುಕತೆಗೆ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದೆ ಇಡಲಿದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.