ಇಲ್ಲಿನ ಗಿರಗಾಮ್ ಚೌಪಟ್ಟಿಯಲ್ಲಿ ಛತ್ರಪತಿ ಶಿವಾಜಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬರೋಬ್ಬರಿ 3600 ಕೋಟಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಮುಂಬೈ (ಡಿ. 24): ಇಲ್ಲಿನ ಗಿರಗಾಮ್ ಚೌಪಟ್ಟಿಯಲ್ಲಿ ಛತ್ರಪತಿ ಶಿವಾಜಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬರೋಬ್ಬರಿ 3600 ಕೋಟಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಮಹಾರಾಜ್ ಶಂಕುಸ್ಥಾಪನೆಗೆ ಫಡ್ನವೀಸ್ ಸರ್ಕಾರ ಅಂದಾಜು 2500 ಕೊಟಿ ಅನುದಾನ ಮಾಡಿದೆ.ಮರಾಠಿಗರ ಓಲೈಕೆಗೆ ಬಿಜೆಪಿ ಯತ್ನಿಸುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ. ಮುಂಬರಲಿರುವ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಶಿವಾಜಿ ಸ್ಮಾರಕ ನಿರ್ಮಾಣ ಮಾಡಿ ಮರಾಠಿಗರ ಓಲೈಕೆ ಪ್ರಯತ್ನಿಸುತ್ತಿದೆ ಎನ್ನಲಾಗುತ್ತಿದೆ. ಅಲ್ಲದೇ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತಿತರ ಗಣ್ಯರು ಭಾಗಿಯಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಅರಬ್ಬೀ ಸಮುದ್ರ ಮಧ್ಯ ಶಿವಾಜಿ ಸ್ಮಾರಕ ನಿರ್ಮಾಣ ಮಾಡಿರುವುದನ್ನು ವಿರೋಧಿಸಿ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಮೀನುಗಾರರ ಒಕ್ಕಲೆಬ್ಬಿಸಲೆಂದೇ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆಯೆಂದು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಬ್ಬೀ ಸಮುದ್ರದ 42 ಕಿಮೀ ಸುತ್ತಮುತ್ತಲಿನ ಪ್ರದೇಶದಲ್ಲಿ ಮೀನುಗಾರಿಕೆ ಬ್ರೆಕ್ ಬೀಳಲಿದೆ.
