ಬಿಜೆಪಿ ಶಾಸಕರು ಹಾಗೂ ಸಂಸದರು ಮೋದಿ ಅವರನ್ನು ಹೊಗಳಿ ಹೇಳಿಕೆ ನೀಡುವುದನ್ನು ನೋಡಿದ್ದೇವೆ. ಆದರೆ, ರಾಜಸ್ಥಾನದ ಬಿಜೆಪಿ ಶಾಸಕ ಜ್ಞಾನ ದೇವ ಅಹುಜಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕೃಷ್ಣನ ಅವತಾರ ಪುರುಷ ಎಂದು ಹೇಳಿದ್ದಾರೆ.
ಜೈಪುರ(ಡಿ.31): ಬಿಜೆಪಿ ಶಾಸಕರು ಹಾಗೂ ಸಂಸದರು ಮೋದಿ ಅವರನ್ನು ಹೊಗಳಿ ಹೇಳಿಕೆ ನೀಡುವುದನ್ನು ನೋಡಿದ್ದೇವೆ. ಆದರೆ, ರಾಜಸ್ಥಾನದ ಬಿಜೆಪಿ ಶಾಸಕ ಜ್ಞಾನ ದೇವ ಅಹುಜಾ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕೃಷ್ಣನ ಅವತಾರ ಪುರುಷ ಎಂದು ಹೇಳಿದ್ದಾರೆ.
ಅಲ್ಲದೆ, 2019ರ ಲೋಕಸಭಾ ಚುನಾವಣೆ ಮುಗಿದ ಬಳಿಕವೂ ಮುಂದಿನ ಒಂದು ದಶಕಕ್ಕೂ ಹೆಚ್ಚು ಕಾಲ ಮೋದಿ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೂ ಕೈಗೊಳ್ಳಲು ಅಸಾಧ್ಯವಾದ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಮೋದಿ ಅವರನ್ನು ಬಣ್ಣಿಸಿದ್ದಾರೆ.
