ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಇಂದು ನಾಲ್ಕು ವರ್ಷದ ಅವಧಿ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸಂದೇಶ ಕಳುಹಿಸಿರುವ ಮೋದಿ, ಸರ್ಕಾರದ ಮೇಲೆ ದೃಢ ವಿಶ್ವಾಸ ವ್ಯಕ್ತಪಡಿಸಿರುವುದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ನವದೆಹಲಿ (ಮೇ.26): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಇಂದು ನಾಲ್ಕು ವರ್ಷದ ಅವಧಿ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸಂದೇಶ ಕಳುಹಿಸಿರುವ ಮೋದಿ, ಸರ್ಕಾರದ ಮೇಲೆ ದೃಢ ವಿಶ್ವಾಸ ವ್ಯಕ್ತಪಡಿಸಿರುವುದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ, ಎನ್ ಡಿಎ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ ದೇಶದ ಜನತೆಗೆ ತಲೆಬಾಗಿ ನಮಸ್ಕರಿಸುತ್ತೇನೆ ಎಂದು ಹೇಳಿದ್ದಾರೆ. ಸರ್ಕಾರದ ನೀತಿಗಳ ಪರವಾಗಿ ಜನ ದೃಢವಾಗಿ ನಿಂತಿದ್ದು, ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವ ತಮ್ಮ ನಿರ್ಧಾರಕ್ಕೆ ದೇಶದ ಜನ ಹೆಗಲು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ತಮ್ಮ ಸರಣಿ ಟ್ವಿಟ್ ಗಳಲ್ಲಿ ಸರ್ಕಾರದ ನಾಲ್ಕು ವರ್ಷದ ಅಭಿವೃದ್ಧಿ ಕಾರ್ಯಗಳು ಮತ್ತು ಜನರಿಂದ ಬಂದ ಸಕಾರಾತ್ಮಕ ಪ್ರತಿಕ್ರಿಯೆಗಳ ಮೇಲೆ ಮೋದಿ ಬೆಳಕು ಚೆಲ್ಲಿದ್ದಾರೆ. ಅಲ್ಲದೇ ತಮ್ಮ ಕನಸಿನ ಭಾರತದ ನಿರ್ಮಾಣಕ್ಕೆ ಮುಂದೆಯೂ ಜನರ ಬೆಂಬಲ ಇದೇ ರೀತಿ ಸಿಗಲಿದೆ ಎಂಬ ವಿಶ್ವಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ.
