ಪ್ರಧಾನಿ ನರೇಂದ್ರ ಮೋದಿ ಇವತ್ತು ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ. ಚೆಪಾಕ್​​'ನ ಮದ್ರಾಸ್​ ವಿವಿಯಲ್ಲಿ 'ದಿನತಂತಿ ಪತ್ರಿಕೆ'ಯ ಅಮೃತ ಮಹೋತ್ಸವದಲ್ಲಿ ನರೇಂದ್ರ ಮೋದಿ ಭಾಗಿಯಾಗಿದರು.  ಅಚ್ಚರಿ ಅಂದ್ರೆ ಈ ಕಾರ್ಯಕ್ರಮದಲ್ಲಿ ನಟ ರಜನಿಕಾಂತ್​ ಕೂಡಾ ವೇದಿ ಮುಂಭಾಗದಲ್ಲಿ ಆಸೀನರಾಗಿದ್ದರು.  ರಜನಿಕಾಂತ್​ ಜೊತೆ ತಮಿಳು ನಟರಾದ ಸೂರ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.  

ಚೆನ್ನೈ (ನ.06): ಪ್ರಧಾನಿ ನರೇಂದ್ರ ಮೋದಿ ಇವತ್ತು ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ. ಚೆಪಾಕ್​​'ನ ಮದ್ರಾಸ್​ ವಿವಿಯಲ್ಲಿ 'ದಿನತಂತಿ ಪತ್ರಿಕೆ'ಯ ಅಮೃತ ಮಹೋತ್ಸವದಲ್ಲಿ ನರೇಂದ್ರ ಮೋದಿ ಭಾಗಿಯಾಗಿದರು. ಅಚ್ಚರಿ ಅಂದ್ರೆ ಈ ಕಾರ್ಯಕ್ರಮದಲ್ಲಿ ನಟ ರಜನಿಕಾಂತ್​ ಕೂಡಾ ವೇದಿ ಮುಂಭಾಗದಲ್ಲಿ ಆಸೀನರಾಗಿದ್ದರು. ರಜನಿಕಾಂತ್​ ಜೊತೆ ತಮಿಳು ನಟರಾದ ಸೂರ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೂ ಮುನ್ನ ತಮಿಳುನಾಡು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಾಜ್ಯದಲ್ಲಿನ ಭಾರಿ ಮಳೆ ಹಾಗೂ ಅದರಿಂದುಂಟಾದ ಪ್ರವಾಹ ಹಾಗೂ ಹಾನಿಗಳ ಕುರಿತು ಮಾಹಿತಿ ಪಡೆದಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಮೋದಿ ಅವರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಚೆನ್ನೈ ಸೇರಿದಂತೆ ರಾಜ್ಯದಾದ್ಯಂತ ಹಲವೆಡೆ ಚಂಡಮಾರುತದಿಂದಾಗಿ ಒಂದು ಸುರಿದ ಮಳೆಗೆ 14ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಬಂಗಾಳಕೊಲ್ಲಿಯ ನೈರುತ್ಯ ಭಾಗ ಹಾಗೂ ಶ್ರೀಲಂಕಾ ಭಾಗದಲ್ಲಿ ಚಂಡಮಾರುತ ಬೀಸುತ್ತಿದ್ದರ ಪರಿಣಾಮ ಭಾರಿ ಮಳೆ ಬೀಳುತ್ತಿದೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಮೋದಿ ಅವರು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.