Asianet Suvarna News Asianet Suvarna News

ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದು ಮೋದಿಯೇ ಹೊರತು ರಾಹುಲ್ ಗಾಂಧಿಯಲ್ಲ: ಕಾಂಗ್ರೆಸ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೆರಿಕಾ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನ ಮಾಡಿದ್ದಾರೆಂದು ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ನರೇಂದ್ರ ಮೋದಿಯವರೇ ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆಂದು ಪ್ರತಿಕ್ರಿಯಿಸಿದ್ದಾರೆ.

PM Modi not Rahul Gandhi insulted India on foreign soil  says Congress
  • Facebook
  • Twitter
  • Whatsapp

ನವದೆಹಲಿ (ಸೆ.12): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೆರಿಕಾ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನ ಮಾಡಿದ್ದಾರೆಂದು ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ನರೇಂದ್ರ ಮೋದಿಯವರೇ ವಿದೇಶಿ ನೆಲದಲ್ಲಿ ಭಾರತವನ್ನು ಅವಮಾನಿಸಿದ್ದಾರೆಂದು ಪ್ರತಿಕ್ರಿಯಿಸಿದ್ದಾರೆ.

ಕಳೆದ 70 ವರ್ಷಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದರು. ಆದರೂ ಆಡಳಿತ ಪಕ್ಷ ಯಾಕೆ ರಾಹುಲ್ ಗಾಂಧಿಯವರನ್ನು ಟೀಕಿಸುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಕಾಂಗ್ರೆಸ್ ಪಕ್ಷವನ್ನು ವಿಫಲವಾದ ಸಾಮ್ರಾಜ್ಯ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಹೇಳಿರುವುದು ಅವರ ಇತಿಹಾಸದ ಅಜ್ಞಾನವನ್ನು ತೋರಿಸುತ್ತದೆ. ಈ ದೇಶದ ಪ್ರಧಾನಿಯನ್ನು ರಾಹುಲ್ ಗಾಂಧಿ ಟೀಕಿಸಿದರೆ ಯಾರೂ ಕೂಡ ಅದನ್ನು ಆಕ್ಷೇಪಿಸಬಾರದು. ಇದು ಪ್ರಜಾಪ್ರಭುತ್ವದ ಲಕ್ಷಣ ಎಂದು ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಹೇಳಿದ್ದಾರೆ.

 

Follow Us:
Download App:
  • android
  • ios