ತಿರುಪತಿ(ಜೂ.09): ಶ್ರೀಲಂಕಾದಿಂದ ನೇರವಾಗಿ ಆಂಧ್ರಪ್ರದೇಶದ ತಿರುಪತಿಗೆ ಬಂದಿಳಿದ ಪ್ರಧಾನಿ ಮೋದಿ, ಇಲ್ಲಿನ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ವಿಮಾನ ನಿಲ್ದಾಣದಿಂದ ನೇರವಾಗಿ ಬಿಜೆಪಿ ಬಹಿರಂಗ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ, ಬಳಿಕ ತಿರುಮಲ ದೇವಸ್ಥಾನಕ್ಕೆ ತರಳಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಪ್ರಧಾನಿ ಮೋದಿ ಅವರಿಗೆ ಆಂಧ್ರದ ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ಸಾಥ್ ನೀಡಿದ್ದು ವಿಶೇಷವಾಗಿತ್ತು.

ಇದಕ್ಕೂ ಮೊದಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲ ESL ನರಸಿಂಹನ್, ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಆಂಧ್ರದ ಸಚಿವರ ದಂಡೇ ಸ್ವಾಗತಿಸಿತು.

ಬಳಿಕ ಬಿಜೆಪಿ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ದೇಶಸೇವೆಗಾಗಿ ಜನತೆ ಬಿಜೆಪಿಗೆ ಚುನಾವಣೆಯಲ್ಲಿ ಬಹುಮತ ನೀಡಿದ್ದು, ಆಂಧ್ರವೂ ಸೇರಿದಂತೆ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.