ದೇಶವು ಈ ಬಾರಿ 70ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಈ ದಿನವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸ್ವಾತಂತ್ರ್ಯೋತ್ಸವ ಆಚರಣೆ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ಮೋದಿ ಸಂಸದರೊಂದಿಗೆ ಚರ್ಚಿಸಿದ್ದಾರೆ.

ನವದೆಹಲಿ: ದೇಶವು ಈ ಬಾರಿ 70ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಈ ದಿನವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ವಾತಂತ್ರ್ಯೋತ್ಸವ ಆಚರಣೆ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ಮೋದಿ ಸಂಸದರೊಂದಿಗೆ ಚರ್ಚಿಸಿದ್ದಾರೆ.

ದೇಶದಾದ್ಯಂತ ಆ.9ರಿಂದಲೇ ಸ್ವಾತಂತ್ರ್ಯೋತ್ಸವ ಅಚರಣೆಗಳು ಆರಂಭಗೊಳ್ಳುವುದು. ಆ. 15ರ ಬಳಿಕ ದೇಶದಾದ್ಯಂತ ‘ಸಂಕಲ್ಪ ಯಾತ್ರೆ’ಯನ್ನು ಹಮ್ಮಿಕೊಳ್ಳಲಾಗುವುದು. ಪ್ರತಿಯೊಬ್ಬ ಪ್ರಜೆ ಹಾಗೂ ದೇಶದ ಅಭಿವೃದ್ಧಿಗಾಗಿ ಈ ಯಾತ್ರೆಯಲ್ಲಿ ಸಂಕಲ್ಪಗೈಯಲಾಗುವುದು, ಎಂದು ಸಂಸದೀಯ ವ್ಯವಹಾರ ಇಲಾಖೆ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

1947ರಿಂದ ಆರಂಭಿಸಿ ಭಾರತವು ಬಹಳಷ್ಟು ಸಾಧಿಸಿದೆ; 2022ರ ವೇಳೆಗೆ ನಾವು ಜಾಗತಿಕ ಶಕ್ತಿಯಾಗಿ ರೂಪುಗೊಳ್ಳುವೆವು ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ, ಎಂದು ಅನಂತ್ ಕುಮಾರ್ ತಿಳಿಸಿದರು.