ತ್ರಿವಳಿ ತಲಾಖನ್ನು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ನೀಡಿದ ಐತಿಹಾಸಿಕ ಮಹತ್ವಪೂರ್ಣ ತೀರ್ಪನ್ನು ಅನೇಕರು ಸ್ವಾಗತಿಸಿದ್ದಾರೆ.

ನವದೆಹಲಿ (ಆ.22): ತ್ರಿವಳಿ ತಲಾಖನ್ನು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ನೀಡಿದ ಐತಿಹಾಸಿಕ ಮಹತ್ವಪೂರ್ಣ ತೀರ್ಪನ್ನು ಅನೇಕರು ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಇದೊಂದು ಐತಿಹಾಸಿಕ ತೀರ್ಪಾಗಿದೆ. ಮುಸಲ್ಮಾನ ಮಹಿಳೆಯರಿಗೆ ಪುರುಷರಷ್ಟೇ ಸಮಾನವಾದ ಸಮಾನತೆಯನ್ನು ನೀಡಲಿದ್ದು, ಮಹಿಳಾ ಸಬಲೀಕರಣಕ್ಕೆ ಇನ್ನಷ್ಟು ಬಲ ತುಂಬುತ್ತದೆ ಎಂದು ಮೋದಿ ಟ್ವೀಟಿಸಿದ್ದಾರೆ.

Scroll to load tweet…

ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದರ ಮೂಲಕ ಮುಸಲ್ಮಾನ ಮಹಿಳೆಯರು ನ್ಯಾಯವನ್ನು ಪಡೆದಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬಿಎಸ್ಪಿ ಕೂಡಾ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.

ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಿಕ್ಕ ಗೆಲುವಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪನ್ನು ನಾವು ಗೌರವಿಸಬೇಕು. ಇದನ್ನು ವಾಸ್ತವವಾಗಿ ಜಾರಿಗೊಳಿಸುವುದು ಕಷ್ಟಸಾಧ್ಯವಾಗಿದೆ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.

ಕಾಂಗ್ರೆಸ್ ಕೂಡಾ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದೆ.

Scroll to load tweet…