ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಕುರಿತಂತೆ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ.

ಚೆನ್ನೈ: ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಕುರಿತಂತೆ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಇಲ್ಲಿ ಮಾಜಿ ಸಿಎಂ ಜಯಲಲಿತಾ ಅವರ ಜನ್ಮದಿನದ ನಿಮಿತ್ತ ಸಬ್ಸಿಡಿ ಸ್ಕೂಟರ್ ಯೋಜನೆಗೆ ಮೋದಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯ ಮಂತ್ರಿ ಕೆ. ಪಳನಿಸ್ವಾಮಿ ಹಾಗೂ ಡಿಸಿಎಂ ಒ. ಪನ್ನೀರಸೆಲ್ವಂ , ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ರಚನೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆಯಲ್ಲಿದ್ದ ಮೋದಿ ಅವರನ್ನು ಆಗ್ರಹಿಸಿದರು.

ಆದರೆ, ಬಳಿಕ ಮಾತನಾಡಿದ ಮೋದಿ, ಒಮ್ಮೆಯೂ ಕಾವೇರಿ ನಿಯಂತ್ರಣ ಮಂಡಳಿ ರಚನೆಯ ಬಗ್ಗೆ ಪ್ರಸ್ತಾಪಿಸಲಿಲ್ಲ.