ಸಂಸತ್ ಅಧಿವೇಶನದ ಕೊನೆ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ನೋಟು ಅಮಾನ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ನವದೆಹಲಿ (ಡಿ.16): ಸಂಸತ್ ಅಧಿವೇಶನದ ಕೊನೆ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ನೋಟು ಅಮಾನ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

ಕಪ್ಪುಹಣ ಮತ್ತು ಭ್ರಷ್ಟಾಚಾರವನ್ನು ಮಟ್ಟ ಹಾಕಲು ಸರ್ಕಾರ ತೆಗೆದುಕೊಂಡಿರುವ ನೋಟು ಅಮಾನ್ಯ ಕ್ರಮವನ್ನು ಪ್ರತಿಪಕ್ಷಗಳು ವಿರೋಧಿಸುತ್ತಿವೆ. 1971 ರ ಇಂದಿರಾ ಗಾಂಧಿ ಅವಧಿಯಲ್ಲಿ ನಮಗೆ ಇದರ ಅಗತ್ಯವಿತ್ತು. ಅಲ್ಲಿಂದ ಇಲ್ಲಿಯವರೆಗೆ ಈ ಕ್ರಮ ಕೈಗೊಳ್ಳದೇ ಇರುವುದರಿಂದ ನಮ್ಮ ದೇಶಕ್ಕೆ ಭಾರೀ ನಷ್ಟವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕಾಳಧನ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ಕಾಂಗ್ರೆಸ್ ಯಾವುದೇ ಕ್ರಮ ಕೈಗೊಳ್ಳದೇ ಕೇವಲ ಟೀಕಿಸುವುದರಲ್ಲೇ ಮಗ್ನರಾಗಿರುವ ಕಾಂಗ್ರೆಸ್ ವಿರುದ್ಧ ಮೋದಿ ಗರಂ ಆಗಿ ಮಾತನಾಡಿದ್ದಾರೆ.

1971 ರಲ್ಲಿ ನೋಟು ಅಮಾನ್ಯಕ್ಕೆ ಎಲ್ಲರೂ ಶಿಫಾರಸ್ಸು ಮಾಡಿದ್ದರು. ಒಂದು ವೇಳೆ ಆ ಅವಧಿಯಲ್ಲಿ ಇದನ್ನು ಜಾರಿಗೊಳಿಸಿದ್ದರೆ ಇಂದು ದೇಶಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೋದಿ ಹೇಳಿದ್ದಾರೆ.