ನವದೆಹಲಿ(ಜ.29): ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಪರೀಕ್ಷೆ ದೊಡ್ಡ ಸಾವಾಲು ಅಲ್ಲ ಎಂದು ಹೇಳಿದ ಮೋದಿ, ಜೀವನದಲ್ಲಿ ದೊಡ್ಡ ದೊಡ್ಡ ಸವಾಲುಗಳನ್ನು ಎದುರಿಸಲು ಪರೀಕ್ಷೆಗಳು ಸಹಾಯ ಮಾಡಲಿವೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಇದೇ ವೇಳೆ ಪರೀಕ್ಷಾ ಸಮಯದಲ್ಲಿ ಮಕ್ಕಳ ಮೇಲೆ ಯಾವುದೇ ಒತ್ತಡ ಹೇರದೆ ಅವರಿಗೆ ಸಹಕರಿಸಲು ಪೋಷಕರಿಗೆ ಪ್ರಧಾನಿ ಸಲಹೆ ನೀಡಿದರು.

ದೆಹಲಿಯ ತಾಲ್‌ಕೊಟೋರಾ ಮೈದಾನದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

"