ಬಿಜೆಪಿ ಅಭ್ಯರ್ಥಿಗಳಿಗೆ ನಾಳೆ ಮೋದಿ ಕ್ಲಾಸ್‌

PM Modi Teleconference with 224 BJP Candidates
Highlights

ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಪಕ್ಷದ ಎಲ್ಲ ಅಭ್ಯರ್ಥಿಗಳ ಜೊತೆ ನಮೋ ಆ್ಯಪ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿ ಕಾನ್ಫರೆನ್ಸ್‌ ನಡೆಸಲಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಪಕ್ಷದ ಎಲ್ಲ ಅಭ್ಯರ್ಥಿಗಳ ಜೊತೆ ನಮೋ ಆ್ಯಪ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿ ಕಾನ್ಫರೆನ್ಸ್‌ ನಡೆಸಲಿದ್ದಾರೆ.

ಗುರುವಾರ ನಮೋ ಆ್ಯಪ್‌ನಲ್ಲಿ ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಿಂದ ಸುಮಾರು ಅರ್ಧ ಗಂಟೆಗಳ ಕಾಲ ಟೆಲಿ ಕಾನ್ಫರೆನ್ಸ್‌ ಮೂಲಕ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ಈ ವೇಳೆ ಚುನಾವಣೆ ಎದುರಿಸುವ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಮೋದಿ ಅವರು ಚುನಾವಣೆಯ ಸಿದ್ಧತೆಗಳ ಬಗ್ಗೆ ಅಭ್ಯರ್ಥಿಗಳಿಂದ ಮಾಹಿತಿ ಸಂಗ್ರಹಿಸಲಿದ್ದಾರೆ. ಜೊತೆಗೆ ಚುನಾವಣೆಯಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆದರೆ, ಕೇವಲ ಅರ್ಧ ಗಂಟೆಯಲ್ಲಿ ಪ್ರಧಾನಿ ಮೋದಿ ಅವರು ಅಭ್ಯರ್ಥಿಗಳನ್ನು ಸ್ವತಃ ಸಂಪರ್ಕಿಸುತ್ತಾರೆಯೇ ಅಥವಾ ಕೇವಲ ಸಾಂಕೇತಿಕವಾಗಿ ಕೆಲವು ಅಭ್ಯರ್ಥಿಗಳನ್ನು ಸಂಪರ್ಕಿಸಿ ಸಂವಾದ ನಡೆಸಲಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.

loader