ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ| 'ಆರ್ಡರ್ ಆಫ್ ಸೇಂಟ್ ಆ್ಯಂಡ್ರ್ಯೂ ದಿ ಅಪೋಸ್ಟಲ್' ಪ್ರಶಸ್ತಿ| ಟ್ವೀಟ್ ಮೂಲಕ ರಷ್ಯಾ ರಾಯಭಾರ ಕಚೇರಿ ಸ್ಪಷ್ಟನೆ| ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡುವ ಪತ್ರಕ್ಕೆ ವ್ಲಾದಿಮರ್ ಪುಟಿನ್ ಸಹಿ|
ನವದೆಹಲಿ(ಏ.12): ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಸೇಂಟ್ ಆ್ಯಂಡ್ರ್ಯೂ ದಿ ಅಪೋಸ್ಟಲ್' ಘೋಷಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ರಷ್ಯಾ ರಾಯಭಾರ ಕಚೇರಿ, ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡುವ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ತಿಳಿಸಿದೆ.
ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಯುಕ್ತ ಅರಬ್ ರಾಷ್ಟ್ರ(ಯುಎಇ) ಕೂಡ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
