ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂ. 15 ರಂದು ನಡೆಯಲಿರುವ ನೀತಿ ಆಯೋಗದ 5ನೇ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಜಲ ನಿರ್ವಹಣೆ, ಕೃಷಿ ಮತ್ತು ರಕ್ಷಣೆಗೆ ಸಂಬಂಧಿಸಿ ಚರ್ಚಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಎರಡನೇ  ಅವಧಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ನೀತಿ ಆಯೋಗದ ಸಭೆ ನಡೆಸುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. 

ಕೌನ್ಸಿಲ್ ಸದಸ್ಯರು, ನೀತಿ ಆಯೋಗದ ಸದಸ್ಯರು, ಕೇಂದ್ರಾ ಡಳಿತ ಪ್ರದೇಶಗಳ ರಾಜ್ಯಪಾಲರು, ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.