ಸಂಘ, ಬಿಜೆಪಿ ನಾಯಕರಿಗೆ ಮೋದಿ ಔತಣಕೂಟ..!

PM Modi to host dinner for RSS, BJP leaders tonight
Highlights

ಸಂಘ, ಬಿಜೆಪಿ ನಾಯಕರಿಗೆ ಮೋದಿ ಔತಣಕೂಟ

ತಮ್ಮ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜನೆ

2019 ರ ಲೋಕಸಭಾ ಚುನಾವಣೆಗೆ ತಯಾರಿ?

ಸೂರಜ್‌ಕುಂಡ್ ಸಂಘದ ಸಭೆಯಲ್ಲಿ ಬಿಜೆಪಿ ನಾಯಕರು

ನವದೆಹಲಿ(ಜೂ.15): ಆರ್‌ಎಸ್‌ಎಸ್‌ ಸಂಘ ಪರಿವಾರ ಮತ್ತು ಬಿಜೆಪಿಯ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಔತಣಕೂಟ ಏರ್ಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ರಾತ್ರಿ ತಮ್ಮ ಅಧಿಕೃತ ನಿವಾಸದಲ್ಲೇ ಮೋದಿ ಔತಣಕೂಟ ಆಯೋಜಿಸಿದ್ದು, 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ಔತಣಕೂಟದ ಆಯೋಜನೆ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಇದೇ ವೇಳೆ ಆರ್‌ಎಸ್‌ಎಸ್‌ ಹಾಗೂ ಸಂಘ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಹರಿಯಾಣದ ಸೂರಜ್‌ಕುಂಡ್ ನಲ್ಲಿ ಸಭೆ ಸೇರಿದ್ದು, ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಆರ್‌ಎಸ್‌ಎಸ್‌ ಸಹ ಸಂಘಟನೆಗಳ ನಡುವಿನ ಸಮನ್ವಯತೆ ಹಾಗೂ 2019 ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಹತ್ವವೆನಿಸುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 

ಇನ್ನು ಹರಿಯಾಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಬಿಜೆಪಿಯ ನಾಯಕರೂ ಭಾಗಾವಹಿಸಲಿದ್ದು, ಆರ್‌ಎಸ್‌ಎಸ್‌ ನ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯ್ಯಾಜಿ ಜೋಷಿ, ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೋಪಾಲ್ ಕೂಡ ಭಾಗಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹರಿಯಾಣದ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. 

loader