ದೇಶಾದ್ಯಂತ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಪಡಿಸುವ ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದಲ್ಲಿ ಚಾಲನೆ ನೀಡಿದರು.

ಮಂಡಲಾ (ಮ.ಪ್ರ.) : ದೇಶಾದ್ಯಂತ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಪಡಿಸುವ ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದಲ್ಲಿ ಚಾಲನೆ ನೀಡಿದರು.

ಗುಡ್ಡಗಾಡು ಪ್ರದೇಶದಲ್ಲಿರುವ ಪಂಚಾಯತ್‌ಗಳನ್ನು ಸಮಗ್ರವಾಗಿ ಹಾಗೂ ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳುವಂತೆ ಅಭಿವೃದ್ಧಿಪಡಿಸುವ ಈ ಯೋಜನೆಗೆ ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರು.ಗಳನ್ನು ವ್ಯಯಿಸಲಿದೆ.

ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನದ ಅಂಗವಾಗಿ ಮಧ್ಯಪ್ರದೇಶದ ರಾಮನಗರ ಗುಡ್ಡಗಾಡು ಜಿಲ್ಲೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡ ಮೋದಿ, ಪಂಚಾಯ್ತಿಗಳ ಅಧಿಕಾರ ಹಾಗೂ ಜವಾಬ್ದಾರಿಯನ್ನು ಹೆಚ್ಚಿಸುವುದು ಮತ್ತು ಅವು ದಕ್ಷವಾಗಿ ಕಾರ್ಯನಿರ್ವಹಿಸುವಂತೆ ಮಾಡುವ ಉದ್ದೇಶದಿಂದ ಗ್ರಾಮ ಸ್ವರಾಜ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ಮೋದಿ ಮಧ್ಯಪ್ರದೇಶದ ಮನೇರಿ ಜಿಲ್ಲೆಯಲ್ಲಿ ಎಲ್‌ಪಿಜಿ ಬಾಟ್ಲಿಂಗ್‌ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ, ಇ-ಆಡಳಿತವನ್ನು ಸಮರ್ಥವಾಗಿ ಜಾರಿಗೊಳಿಸಿದ, ಬಯಲುಶೌಚಮುಕ್ತ ಗ್ರಾಮಗಳನ್ನು ರೂಪಿಸಿದ ಹಾಗೂ ಎಲ್‌ಪಿಜಿ ವಿತರಣೆ ಯೋಜನೆ ಜಾರಿಗೊಳಿಸಿ ಸಂಪೂರ್ಣ ಹೊಗೆಮುಕ್ತ ಗ್ರಾಮಗಳನ್ನು ನಿರ್ಮಿಸಿದ ಗ್ರಾಮ ಪಂಚಾಯ್ತಿಗಳಿಗೆ ಬಹುಮಾನ ವಿತರಿಸಿದರು.