ಕಳೆದ ಸೆ.22ರಿಂದ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೆಲದಿನಗಳ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ್ದಾರೆ.

ಚೆನ್ನೈ (ಅ.18): ಪ್ರಧಾನಿ ನರೇಂದ್ರ ಮೋದಿ ಇಂದು ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರ ಆರೋಗ್ಯ ವಿಚಾರಿಸಲಿದ್ದಾರೆ.

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ್ದರು.

ಮೊನ್ನೆಯಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ತಮಿಳುನಾಡು ಸಿಎಂ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದರು.

ಕಳೆದ ಸೆ.22ರಿಂದ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.