ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬ48ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿಪ್ರಧಾನಿ ಮೋದಿಯಿಂದ ರಾಹುಲ್ ಗೆ ಶುಭಾಷಯಧೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯದ ಹಾರೖಕೆ
ನವದೆಹಲಿ(ಜೂ.19): ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ೪೮ನೇ ಜನ್ಮದಿನಾಚರಣೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ ಮೂಲಕ ರಾಹುಲ್ ಅವರಿಗೆ ಶುಭಾಷಯ ತಿಳಿಸಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ ಅವರಿಗೆ ಟ್ವಿಟ್ ಮಾಡಿರುವ ಪ್ರಧಾನಿ, ಧೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಎಂದು ಶುಭಾಷಯ ತಿಳಿಸಿದ್ದಾರೆ.
ಇದಕ್ಕೂ ಮೊದಲು ರಾಹುಲ್ ಗಾಂಧಿ ನವದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾ ಕುರಿತು ಪ್ರಧಾನಿ ಮೇಲೆ ವಾಗ್ದಾಳಿ ನಡೆಸಿ ಟ್ವಿಟ್ ಮಾಡಿದ್ದರು. ಇದಾದ ಒಂದು ಗಂಟೆ ಬಳಿಕ ಮೋದಿ ಟ್ವಿಟ್ ಮಾಡಿ ರಾಹುಲ್ ಅವರಿಗೆ ವಿಶ್ ಮಾಡಿದ್ದಾರೆ.
ಇನ್ನು ರಾಹುಲ್ ಗಾಂಧಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಕಾಂಗ್ರೆಸ್ ಅಧ್ಯಕ್ಷರಿಗೆ ಶುಭಾಷಯ ತಿಳಿಸಿದ್ದಾರೆ.
