ತಮ್ಮ ಸಭೆಗಳಲ್ಲಿ ಮೊಬೈಲನ್ನು ಯಾಕೆ ನಿಷೇಧಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸುವಾಗ ಕೆಲವರು ಸಾಮಾಜಿಕ ಜಾಲತಾಣಗಳನ್ನು ಚೆಕ್ ಮಾಡುತ್ತಿರುತ್ತಾರೆ ಹಾಗಾಗಿ ಸಭೆಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ನವದೆಹಲಿ (ಏ.21): ತಮ್ಮ ಸಭೆಗಳಲ್ಲಿ ಮೊಬೈಲನ್ನು ಯಾಕೆ ನಿಷೇಧಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸುವಾಗ ಕೆಲವರು ಸಾಮಾಜಿಕ ಜಾಲತಾಣಗಳನ್ನು ಚೆಕ್ ಮಾಡುತ್ತಿರುತ್ತಾರೆ ಹಾಗಾಗಿ ಸಭೆಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡಾ ಇತ್ತೀಚಿನ ದಿನಗಳಲ್ಲಿ ಬ್ಯುಸಿಯಾಗಿದ್ದಾರೆ. ಹೆಚ್ಚಿನವರು ಸೋಷಿಯಲ್ ಮೀಡಿಯಾದಲ್ಲಿ ಕಾಲ ಕಳೆಯುವಿದನ್ನು ನಾನು ನೋಡಿದ್ದೇನೆ. ಹಾಗಾಗಿ ನನ್ನ ಸಭೆಗಳಲ್ಲಿ ಮೊಬೈಲನ್ನು ನಿಷೇಧಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.
ಜನರ ಅಭಿವೃದ್ಧಿಗಾಗಿ ಸೋಷಿಯಲ್ ಮೀಡಿಯಾವನ್ನು ಬಳಸಬೇಕು. ಸ್ವಯಂ ಪ್ರಶಂಸೆಗಾಗಿ ಅಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
