ಕಲಬುರಗಿ (ಮಾ. 03):  ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಾ.6 ರಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ.

ಖಾಸಗಿ ಎಂಜಿನೀಯರಿಂಗ್ ಕಾಲೇಜುಗಳ ಸರ್ಕಾರಿ ಕೋಟಾ ಸೀಟು ದರ ಹೆಚ್ಚಳ

ಇಲ್ಲಿನ ಎನ್‌.ವಿ. ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೋದಿ ಮಾತನಾಡಲಿದ್ದಾರೆ. ಈ ವೇಳೆ ಚಿಂಚೋಳಿಯ ಕಾಂಗ್ರೆಸ್‌ ಶಾಸಕ, ಲಂಬಾಣಿ ಸಮುದಾಯದ ಪ್ರಭಾವಿ ನಾಯಕರಲ್ಲೊಬ್ಬರಾದ ಉಮೇಶ್‌ ಜಾಧವ್‌ ಅವರು ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರುವ ನಿರೀಕ್ಷೆ ಇದೆ.

ಮಾ. 10 ಕ್ಕೆ ಮರೆಯದೇ ಪೋಲಿಯೋ ಹಾಕಿಸಿ

ಈ ಹಿಂದೆ ಮೇ 1, ಆ ಬಳಿಕ ಮೇ 7ಕ್ಕೆ ಮೋದಿ ರ್ಯಾಲಿ ಮುಂದೆ ಹೋಗಿತ್ತು. ಆದರೆ, ಈಗ ಕೊನೇ ಕ್ಷಣದಲ್ಲಿ ಮೇ 6ರಂದು ಕಲಬುರಗಿಯಲ್ಲಿ ಮೋದಿ ರಾರ‍ಯಲಿ ನಡೆಸಲು ನಿರ್ಧರಿಸಲಾಗಿದೆ. ಅಂದು ಮಧ್ಯಾಹ್ನ 2ರಿಂದ 3 ಗಂಟೆಯವರೆಗೆ ನಡೆಯಲಿರುವ ಸಮಾವೇಶದಲ್ಲಿ ಮೋದಿ ಅವರು ಕಲಬುರಗಿ ಮಾತ್ರವಲ್ಲದೆ ನೆರೆಯ ಜಿಲ್ಲೆಗಳಿಂದಲೂ ಆಗಮಿಸುವ ಲಕ್ಷಾಂತರ ಮಂದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಮಾವೇಶದ ಬಳಿಕ ಮೋದಿ ಅವರು ನೇರವಾಗಿ ತಮಿಳುನಾಡಿಗೆ ಪ್ರಯಾಣಿಸಲಿದ್ದಾರೆ. ಅಲ್ಲೂ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ತಿಂಗಳಷ್ಟೇ ಮೋದಿ ಅವರು ಹುಬ್ಬಳ್ಳಿ ಸಮಾವೇಶದ ಮೂಲಕ ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದರು.

ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಶನಿವಾರ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್‌ ಅವರು ಸ್ವಚ್ಛತೆ ಸೇರಿದಂತೆ ವಿವಿಧ ಸಿದ್ಧತಾ ಕಾರ್ಯಕಗಳ ಕುರಿತು ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದರು.

ವಿರಾಟ್ ಕೊಹ್ಲಿ ಜೊತೆ ತಮನ್ನಾ ಡೇಟಿಂಗ್?

ಜಾಧವ್‌ ಬಿಜೆಪಿಗೆ:

ಕಾಂಗ್ರೆಸ್‌ನಿಂದ ಮುನಿಸಿಕೊಂಡಿರುವ ಲಂಬಾಣಿ ಸಮಾಜದವರಾದ ಶಾಸಕ ಉಮೇಶ್‌ ಜಾಧವ್‌ ಅವರು ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರಲಿರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಲಂಬಾಣಿ ಸಮಾಜದ ಸ್ವಾಮೀಜ ರಾಮರಾವ್‌ ಮಹಾರಾಜ್‌ ಅವರನ್ನೂ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದೆ.

ಉಮೇಶ್‌ ಜಾಧವ್‌ ಅವರು ಹಾಲಿ ಚಿಂಚೋಳಿ ಕ್ಷೇತ್ರದ ಶಾಸಕರಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇ ಆದರೆ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಲಬುರ್ಗಿ ಕ್ಷೇತ್ರದಿಂದಲೇ ಕಣಕ್ಕಿಳಿಯಲಿದ್ದಾರೆ.