ಬೆಳಗಾವಿ[ಅ.02]: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿ ಆಗಿದ್ದರು. ಹಾಗಾಗಿ ಪ್ರವಾಹ ಕುರಿತು ಮೋದಿ ಅವರಿಗೆ ಟ್ವೀಟ್‌ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳುವ ಮೂಲಕ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿವಾದ ಸೃಷ್ಟಿಸಿದ್ದಾರೆ.

'ಬಿಹಾರಕ್ಕೆ ಮಿಡಿದ ಮೋದಿ 52 ಇಂಚಿನ ಎದೆ, ಕರ್ನಾಟಕ ವಿಚಾರದಲ್ಲಿ ಕಲ್ಲುಬಂಡೆ ಆಗಿದ್ದೇಕೆ?'

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

ಬ್ಯೂಟಿ ಆಫ್ ಡೆಮಾಕ್ರಸಿ! ಸೂಲಿಬೆಲೆಗೆ ಸಿಟಿ ರವಿ ಪ್ರತಿಕ್ರಿಯೆ

ಕೇಂದ್ರದ ಎನ್‌ಡಿಆರ್‌ಎಫ್‌ ಅನುದಾನ ಜಿಲ್ಲಾಧಿಕಾರಿ ಖಾತೆಯಲ್ಲಿದೆ. ಪ್ರವಾಹ ಪುನರ್ವಸತಿ ಕಾರ್ಯ ಭರದಿಂದ ಸಾಗಿದೆ ಎಂದು ಹೇಳಿದರು.