ನವದೆಹಲಿ(ಮಾ.27): ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನು ಕೆಲವೇ ಕ್ಷಣಗಳಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಖುದ್ದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಇಂದು ನಾನು 11-30 ರಿಂದ 12-00 ಗಂಟೆಯೊಳಗಾಗಿ ನಾನು ದೇಶವನ್ನುದ್ದೇಶಿಸಿ ಮಾತನಾಡಲಿದ್ದೇನೆ ಎಂಧು ತಿಳಿಸಿದ್ದಾರೆ.

ಇನ್ನು ಮೋಧಿ ಟ್ವೀಟ್ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಚುನಾವಣೆ ಸಂದರ್ಭದಲ್ಲಿ ಮೋದಿ ಏನು ಮಾತನಾಡಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಟ್ವೀಟ್ ನ್ನು 20 ಸಾವಿರ ಜನ ಲೆಐಕ್ ಮಾಡಿದ್ದು, 8,500 ರಿಟ್ವೀಟ್ ಮಾಡಿದ್ದಾರೆ. ಅಂತೆಯೇ 5 ಸಾವಿರ ಜನ ಈ ಕುರಿತು ಮಾತನಾಡಿದ್ದಾರೆ.

ಇಂದು ಬೆಳಗ್ಗೆ ಪ್ರಧಾನಿ ಮೋದಿ ಭದ್ರತಾ ಸಮಿತಿ ಸಭೆ ನಡೆಸಿದ್ದು, ಆ ಬಳಿಕ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡುವುದಾಗಿ ತಿಳಿಸಿದ್ದಾರೆ. ಮೋದಿ ಅವರ ಈ ಘೋಷಣೆ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದೆ.

ಸದ್ಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ಮೋದಿ, ಕೆಲವೇ ನಿಮಿಷದಲ್ಲಿ ದೇವನ್ನುದ್ದೇಶಿಸಿ ಮಾತನಾಡಲಿದ್ದಾರೆ.