ಇದೇ ತಿಂಗಳ 29 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಬೆಂಗಳೂರು (ಅ.22): ಇದೇ ತಿಂಗಳ 29 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಅ. 29 ರ ಬೆಳಗ್ಗೆ 10.30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಅಲ್ಲಿಂದ ಉಜಿರೆಗೆ ತೆರಳಲಿದ್ದಾರೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 2:30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರಮನೆ ಮೈದಾನದಲ್ಲಿ 3.30 ರವರೆಗೆ ನಡೆಯುವ ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4:45ಕ್ಕೆ ಬೆಂಗಳೂರಿನಿಂದ ಬೀದರ್ಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 5:10ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆಗೊಳಿಸಿ ಸಂಜೆ 6:20ಕ್ಕೆ ಬೀದರ್ನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
