ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಿಂದ ಸ್ಪರ್ಧೆ ಮಾಡುತ್ತಾರಾ ಎನ್ನುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು: ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವ ವದಂತಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಬಲವಾಗಿ ತಳ್ಳಿ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ಕರ್ನಾಟಕದಿಂದ ಸ್ಪರ್ಧಿಸುತ್ತಾರೆ ಎಂಬುದು ಸತ್ಯಕ್ಕೆ ದೂರವಾದದ್ದು. ಇದರಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

ಅವರು ಕರ್ನಾಟಕದ ಯಾವುದೇ ಕ್ಷೇತ್ರಗಳಿಂದಲೂ ಕೂಡ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.