ನವದೆಹಲಿ(ಸೆ.26): ಮಾಜಿ ಪ್ರಧಾನಿ, ಕಾಂಗ್ರೆಸ್ ರಾಜ್ಯಸಭಾ ಸಂಸದ  ಡಾ. ಮನಮೋಹನ್ ಸಿಂಗ್ ಇಂದು 87ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ದೇಶ ಕಂಡ ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು  ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಗವಂತ ಅವರಿಗೆ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಲಿ ಎಂದು ಹಾರೈಸಿದ್ದಾರೆ.

ಅದರಂತೆ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತಮ ಆರೋಗ್ಯ ದೊರೆಯುವಂತಾಗಲಿ ಎಂದು ಶುಭ ಕೋರಿದ್ದಾರೆ.

ಇನ್ನು ಡಾ. ಸಿಂಗ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಮಾಜಿ ಪ್ರಧಾನಿಗೆ ಜನ್ಮದಿನದ ಶುಭಾಶಯ ಎಂದು ತಿಳಿಸಿದ್ದಾರೆ.