ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಸೋನಿಯಾ ಗಾಂಧಿ ಇಂದು 71ನೇ ಹುಟ್ಟುಹಬ್ಬವನ್ನಾಚರಿಸುತ್ತಿದ್ದು, ಮೋದಿ ಟ್ವೀಟರ್ ಮೂಲಕ, ಸೋನಿಯಾ ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಕೋರಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು, ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ, ಎಂದು ಪ್ರಧಾನಿ ಟ್ವೀಟಿಸಿದ್ದಾರೆ.
ಸೋನಿಯಾ ಗಾಂಧಿ 1998 ರಿಂದ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಸೋನಿಯಾ ನಿವಾಸ #10 ಜನಪಥದ ಮುಂದೆ ಜಮಾಯಿಸಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.
