ಇಂದು ಸಂಜೆ ನಡೆಯಲಿರುವ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾoಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್,  ಕೇಂದ್ರ ಸಚಿವರು ಮತ್ತಿತರು ಭಾಗವಹಿಸಲಿದ್ದಾರೆ.

ನವದೆಹಲಿ (ಡಿ.06): ನಿನ್ನೆ ರಾತ್ರಿ ನಿಧನ ಹೊಂದಿದ ತಮಿಳುನಾಡು ಮುಖ್ಯಮಂತ್ರಿ ಜಯಾಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರನಾಯಕರು ಚೆನ್ನೈಗೆ ಆಗಮಿಸಲಿದ್ದಾರೆ.

ಇಂದು ಸಂಜೆ ನಡೆಯಲಿರುವ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾoಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೇಂದ್ರ ಸಚಿವರು ಮತ್ತಿತರು ಭಾಗವಹಿಸಲಿದ್ದಾರೆ.

ಜಯಾ ನಿಧನಕ್ಕೆ ಸಂತಾಪಗಳ ಮಹಾಪೂರವೇ ಹರಿದು ಬರುತ್ತಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ-ರಾಷ್ಟ್ರಪತಿ ಹಾಮಿದ್ ಅನ್ಸಾರಿ, ಕೇಂದ್ರ ಸಚಿವರು, ಬೇರೆ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಜಯಾ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.