ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಅಧಿಕಾರಾವಧಿಯ ಕೊನೆಯಲ್ಲಿದ್ದಾರೆ. ಈ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಯವರನ್ನು ಹಾಡಿ ಹೊಗಳಿದ್ದಾರೆ. ಅಲ್ಲದೇ, ತಾವು ಪ್ರಧಾನಿಯಾಗಿ ದೆಹಲಿಗೆ ಬಂದಿದ್ದಾಗ, ತಮ್ಮನ್ನ ತಂದೆಯ ಸ್ಥಾನದಲ್ಲಿ ನಿಂತು ನೋಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ(ಜು.03): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಅಧಿಕಾರಾವಧಿಯ ಕೊನೆಯಲ್ಲಿದ್ದಾರೆ. ಈ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಯವರನ್ನು ಹಾಡಿ ಹೊಗಳಿದ್ದಾರೆ. ಅಲ್ಲದೇ, ತಾವು ಪ್ರಧಾನಿಯಾಗಿ ದೆಹಲಿಗೆ ಬಂದಿದ್ದಾಗ, ತಮ್ಮನ್ನ ತಂದೆಯ ಸ್ಥಾನದಲ್ಲಿ ನಿಂತು ನೋಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ, ರಾಷ್ಟ್ರಪತಿ ಭವನದಲ್ಲಿ 'ಪ್ರಣಬ್ ಮುಖರ್ಜಿ- ಎ ಸ್ಟೇಟ್ಸ್ ಮನ್' ಎಂಬ ಫೋಟೋ ಆಲ್ಪಮ್ ಬಿಡುಗಡೆಗೊಳಿಸಲಾಯಿತು. ಈ ವೇಳೆ, ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತನ್ನ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಡುವಿನ ಭಾಂದವ್ಯವನ್ನು ಸ್ಮರಿಸಿಕೊಂಡಿದ್ದಾರೆ. ತಾವು ಪ್ರಧಾನಿಯಾಗಿ ದೆಹಲಿಗೆ ಬಂದಾಗ, ತಮ್ಮ ಮಾರ್ಗದರ್ಶಕರಾಗಿದ್ದವರು ಪ್ರಣಬ್ ಮುಖರ್ಜಿ. ನಾನು ಉತ್ತರಪ್ರದೇಶ ಚುನಾವಣಾ ಪ್ರಚಾರದಲ್ಲಿ ಮಗ್ನನಾಗಿದ್ದಾಗ, ಪ್ರಣಬ್ ಮುಖರ್ಜಿಯವರು, ಗೆಲುವು-ಸೋಲು ಇದ್ದಿದ್ದೇ, ಆದರೆ ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಎಂದು ನನಗೆ ಹೇಳಿದ್ದರು. ಅಲ್ಲದೇ, ಇನ್ನು ಅನೇಕ ಸಂದರ್ಭಗಳಲ್ಲಿ ನನ್ನ ಕಾಳಜಿ ವಹಿಸಿದ್ದಾರೆ ಎಂದು ಗದ್ಗದಿತರಾಗಿಯೇ ನುಡಿದರು