ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ  ಸಭೆ ನಡೆಯಲಿದೆ. ಗುಜರಾತ್, ಹಿಮಾಚಲಪ್ರದೇಶದಲ್ಲಿ ಗೆದ್ದ ಉತ್ಸಾಹದಲ್ಲಿ ಬಿಜೆಪಿ  ರಾಜ್ಯ ವಿಧಾನಸಭಾ ಚುನಾವಣಾ ಸಿದ್ಧತೆಗೆ ರಣತಂತ್ರ ರೂಪಿಸಲಿದೆ.

ಬೆಂಗಳೂರು (ಡಿ.25): ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಗುಜರಾತ್, ಹಿಮಾಚಲಪ್ರದೇಶದಲ್ಲಿ ಗೆದ್ದ ಉತ್ಸಾಹದಲ್ಲಿ ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣಾ ಸಿದ್ಧತೆಗೆ ರಣತಂತ್ರ ರೂಪಿಸಲಿದೆ.

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ಇತರ ಸದಸ್ಯರು ಉಪಸ್ಥಿತರಿರಲಿದ್ದಾರೆ. ಮಹದಾಯಿ ವಿವಾದ, ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ, ಚುನಾವಣೆ ಮೇಲೆ ಪ್ರಭಾವ ಬೀರುವ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರಲ್ಲಿ ನಡೆಯುವ ಬೃಹತ್ ಪರಿವರ್ತನಾ ಸಮಾವೇಶದ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ಸುವರ್ಣ ನ್ಯೂಸ್'ಗೆ ಮಾಹಿತಿ ಲಭ್ಯವಾಗಿದೆ.

ಪರಿವರ್ತನಾ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.