ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು, ಸೂಕ್ತ ನೆರವನ್ನು ನೀಡುವ ಭರವಸೆ ನೀಡಿದ್ದಾರೆ.

ಚೆನ್ನೈ(ಡಿ.2): ಓಖಿ ಚಂಡಮಾರುತಕ್ಕೆ ತಮಿಳುನಾಡು ಕೇರಳ ರಾಜ್ಯಗಳು ತತ್ತರಿಸಿದ್ದು, ಈಗಾಗಲೇ ಚಂಡಮಾರುತಕ್ಕೆ 12 ಮಂದಿ ಬಲಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು, ಸೂಕ್ತ ನೆರವನ್ನು ನೀಡುವ ಭರವಸೆ ನೀಡಿದ್ದಾರೆ.

ಚಂಡಮಾರುತದಿಂದ ಸದ್ಯ ಹಲವು ಮೀಗಾರರೂ ಕೂಡ ಕಣ್ಮರೆಯಾಗಿದ್ದು, ಕಣ್ಮರೆಯಾದ ಮೀನುಗಾರರಿಗಾಗಿ ಶೋಧ ನಡೆಸಲಾಗುತ್ತಿದೆ. ರಕ್ಷಣೆಗಾಗಿ ಹರಸಾಹಸ ಪಡಲಾಗುತ್ತಿದೆ. ಇದುವರೆಗೆ ಒಟ್ಟು 200 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಚಂಡಮಾರುತದಿಂದ ಭಾರೀ ಪ್ರಮಾಣದಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಸುರಿಯುತ್ತಿದ್ದು, ಆಹಾರ ಹಾಗೂ ಕುಡಿಯುವ ನೀರಿಗಾಗಿ ಹಾಹಾಕಾರ ಏರ್ಪಟ್ಟಿದೆ.

ಚಂಡಮಾರುತದ ವೇಳೆ ಸಮುದ್ರದಲ್ಲಿ ಮುಳುಗಿದ ಬೋಟ್’ಗಳಲ್ಲಿದ್ದ 14 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, 8 ಸಿಬ್ಬಂದಿ ಬಗ್ಗೆ ಇನ್ನಾದರೂ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ.