ನವದೆಹಲಿ :  ಉಗ್ರ ದಾಳಿ ಹಿನ್ನೆಲೆಯಲ್ಲಿ ಶುಕ್ರವಾರ ಭದ್ರತೆಗಾಗಿನ ಸಂಪುಟ ಉಪ ಸಮಿತಿಯ ತುರ್ತು ಸಭೆ ನಡೆಸಿದ್ದ ಪ್ರಧಾನಿ ಮೋದಿ, ಶನಿವಾರ (ಫೆ.16) ಸರ್ವ ಪಕ್ಷ ಸಭೆ ಕರೆದಿದ್ದಾರೆ. ಅದರಲ್ಲಿ ಪಾಕಿಸ್ತಾನ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ನಿರೀಕ್ಷೆ ಇದೆ. 

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರ ದಾಳಿ ಕುರಿತ ಸಮಗ್ರ ಮಾಹಿತಿ ಹಂಚಿಕೊಳ್ಳಲು ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷಗಳ ಸಭೆ ಕರೆದಿದೆ. 

ಸರ್ಕಾರ ಕೈಗೊಂಡ ಕ್ರಮಗಳನ್ನು ಎಲ್ಲ ಪಕ್ಷಗಳಿಗೆ ಮನವರಿಕೆ ಮಾಡಿಕೊಡುವ ಮೂಲಕ ಇಡೀ ದೇಶ ಒಂದೇ ದನಿಯಾಗಿ ಈ ದುರ್ಘಟನೆಯನ್ನು ಎದುರಿ ಸಲು ಬದ್ಧವಾಗಿದೆ ಎಂಬುದನ್ನು ತೋರ್ಪಡಿಲು ಈ ಸಭೆ ಕರೆಯಲಾಗಿದೆಎಂದು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.