ಈ ವಾರದ ವೀಕೆಂಡ್‌'ಗೆ  ಶ್ರೀಕ್ಷೇತ್ರ  ಧರ್ಮಸ್ಥಳ  ಮಂಜುನಾಥನ  ಸನ್ನಿಧಿಗೆ  ಭೇಟಿ ನೀಡುವ ಪ್ಲಾನ್ ಮಾಡಿದ್ದೀರಾ? ಹಾಗಾದ್ರೆ ಕೂಡಲೇ ಪ್ಲಾನ್‌ ಬದಲಾಯಿಸಿಕೊಳ್ಳಿ, ಯಾಕಂದರೆ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಭಕ್ತರಿಗೆ ಮಂಜುನಾಥಸ್ವಾಮಿ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ (ಅ. 26): ಈ ವಾರದ ವೀಕೆಂಡ್‌'ಗೆ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಭೇಟಿ ನೀಡುವ ಪ್ಲಾನ್ ಮಾಡಿದ್ದೀರಾ? ಹಾಗಾದ್ರೆ ಕೂಡಲೇ ಪ್ಲಾನ್‌ ಬದಲಾಯಿಸಿಕೊಳ್ಳಿ, ಯಾಕಂದರೆ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಭಕ್ತರಿಗೆ ಮಂಜುನಾಥಸ್ವಾಮಿ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 29 ರ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿಯ ಭದ್ರತಾ ದೃಷ್ಟಿಯಿಂದ 28 ರ ಶನಿವಾರ ಮಧ್ಯಾಹ್ನ 2 ಗಂಟೆಯಿಂದ 29ರ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನ ಪಡೆಯಲು ನಿರ್ಬಂಧಿಸಲಾಗಿದೆ. ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಪ್ರಧಾನಿಗಳ ಭೇಟಿಯಿಂದಾಗಿ ಒಂದು ದಿನದ ಮಟ್ಟಿಗೆ ಮಂಜುನಾಥಸ್ವಾಮಿ ದರ್ಶನಕ್ಕೆ ನಿರ್ಬಂಧ ವಿಧಿಸಿದ್ದೇವೆ. ಭದ್ರತೆಯ ಜೊತೆಗೆ ವಾಹನ ನಿಲುಗಡೆಗೂ ತೊಂದರೆಯಾಗಲಿದೆ ಹಾಗಾಗಿ ಭಕ್ತಾದಿಗಳು ಸಹಕರಿಸಬೇಕಾಗಿ ಮನವಿ ಮಾಡಿದೆ. ಆ 24 ಗಂಟೆಗಳ ಸಮಯದ ಬದಲು ಬೇರೆ ಸಮಯದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದೆ.