ಕರುಣಾನಿಧಿ ನಿಧನಕ್ಕೆ ಪ್ರಧಾನಿ ಮೋದಿ, ಗಣ್ಯರ ಸಂತಾಪ

pm narendra modi Condolences Karunanidhi Death
Highlights

ಕರುಣಾನಿಧಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ನವದೆಹಲಿ[ಆ.7]  ದ್ರಾವಿಡ ಚಳವಳಿಯ ಹೋರಾಟಗಾರ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮುತ್ತವೇಲು ಕರುಣಾನಿಧಿ[94] ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮಂಗಳವಾರ ಸಂಜೆ 6-10ಕ್ಕೆ ಮಾಜಿ ಮುಖ್ಯಮಂತ್ರಿ ಮೃತಪಟ್ಟ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ಖಚಿತ ಪಡಿಸಿದ ನಂತರ ಪ್ರಧಾಣಿ ಟ್ವೀಟ್ ಮಾಡಿದ್ದಾರೆ. ತಮಿಳುನಾಡು ಒಬ್ಬ ಧಿಮಂತ ನಾಯಕನನ್ನು ಶಾಶ್ವತವಾಗಿ ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ದೊರೆಯಲಿ ಎಂದು ಹೇಳಿದ್ದಾರೆ.

ತಮಿಳರ ದ್ರಾವಿಡ ಕಣ್ಮಣಿ ಇನ್ನಿಲ್ಲ

ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿದ್ದು ಭಾರತ ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತ ದೊಡ್ಡ ನಾಯಕರೊಬ್ಬರನ್ನು ಕಳೆದುಕೊಂಡಿದೆ ಎಂದಿದ್ದಾರೆ

 

 

loader