ಪ್ರಧಾನಮಂತ್ರಿಗಳು ಎಲ್ಲಾ ಸಮಯದಲ್ಲೂ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಆರ್‌ಟಿಐ ಮೂಲಕ ಹೇಳಿದೆ.
ನವದೆಹಲಿ (ಅ.13): 'ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಮೇಲೆ ಅವರು ರಜೆಯನ್ನೇ ಪಡೆದಿಲ್ಲವಂತೆ'. ಇದನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವೇ ಸ್ಪಷ್ಟಪಡಿಸಿದೆ.
ಮಾಹಿತಿ ಹಕ್ಕಿನಡಿಯಲ್ಲಿ ಪ್ರಧಾನಿ ಹಾಗೂ ಸಂಪುಟ ಕಾರ್ಯದರ್ಶಿಗಳ ರಜೆಯ ನಿಯಮಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರಧಾನಿ ಕಾರ್ಯಾಲಯ ಉತ್ತರಿಸಿದೆ.
ಪ್ರಧಾನಮಂತ್ರಿಗಳು ಎಲ್ಲಾ ಸಮಯದಲ್ಲೂ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಆರ್ಟಿಐ ಮೂಲಕ ಹೇಳಿದೆ.
ಆದರೆ ಈ ಹಿಂದಿನ ಪ್ರಧಾನಿಗಳ ರಜೆ ಕುರಿತ ದಾಖಲೆಗಳು ಕಚೇರಿಯಲ್ಲಿ ಇಲ್ಲ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
