ಮೈಸೂರು ಕಾರ‍್ಯಕರ್ತರ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌: ಏನಂದ್ರು ನೋಡಿ

ಮೈಸೂರು, ಅ.11 : ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಂವಾದ ನಡೆಸಿದರು. 

ಮಾನಸ ಗಂಗೋತ್ರಿಯ ಸೆನೆಟ್‌ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ ಮಾತನಾಡಿ, ನೀವು ತಂದಿರುವ ಮುದ್ರಾ ಯೋಜನೆಯಿಂದಾಗಿ ರೈತರಿಗೆ ತುಂಬಾ ಅನುಕೂಲವಾಗಿದೆ ಹಾಗೂ ಸಣ್ಣ ಹಿಡುವಳಿದಾರರಿಗೆ ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ತಲುಪಿದೆ. 

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರಿಗೆ ಕೈಗೆಟುಕುವ ಬಡ್ಡಿ ದರದಲ್ಲಿ ಸಾಲ ನೀಡಿ ಸ್ವಾವಲಂಬಿಗಳಾಗಲು ತುಂಬಾ ಅನುಕೂಲವಾಗಿದೆ. ನಾವು ಮಾಡಿರುವ ಕಾಮಗಾರಿಗಳಲ್ಲಿ ವಿಶ್ವಮಾನವ ಎಕ್ಸಪ್ರೆಸ್‌ ರೈಲು ಮೈಸೂರಿನಿಂದ ಕೆಲಸಕ್ಕೆಂದು ಬೆಂಗಳೂರಿಗೆ ಹೋಗುವ ನೌಕರರಿಗೆ ಮತ್ತು ಸರ್ಕಾರಿ ನೌಕರರಿಗೆ ಸಹಾಯವಾಗಿದೆ.

 ಅಲ್ಲದೆ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇನೆ. ಇಂದು ಮೈಸೂರು ಕೊಡಗು ಅಭಿವೃದ್ಧಿಯ ಪಥದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಸಂವಾದದಲ್ಲಿ ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಮೋದಿ ಉತ್ತರಿಸಿದರು. ಶಾಸಕರಾದ ಎಲ್‌. ನಾಗೇಂದ್ರ, ಬಿ. ಹರ್ಷವರ್ಧನ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ. ಶಿವಣ್ಣ ಇದ್ದರು.