ನವದೆಹಲಿ (ಅ. 27): ಪ್ರತಿವರ್ಷದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಗಡಿಯಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಲಿದ್ದಾರೆ. ಬಳಿಕ ಯೋಧರೊಂದಿಗೆ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ಈ ವರ್ಷ ಯಾವ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ವರ್ಷ ಪ್ರಧಾನಿ ಮೋದಿ ಅವರು ಸೈನಿಕರು ಮತ್ತು ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸರ ಜತೆ ಉತ್ತರಾಖಂಡದ ಭಾರತ-ಚೀನಾ ಗಡಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಾಚರಣೆ ಮಾಡಿದ್ದರು. ಅಲ್ಲದೇ ಮೋದಿ ಪ್ರಧಾನಿಯಾದಾಗಿನಿಂದಲೂ ಗಡಿಯಲ್ಲಿಯೇ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ.

ದೀಪಾವಳಿಗೆ ಖರೀದಿಸಬಹುದಾದ 10 ಲಕ್ಷ ರೂ ಒಳಗಿನ ಟಾಪ್ ಕಾರು!

2014 ರಲ್ಲಿ ಮೊದಲ ಬಾರಿಗೆ ಸಿಯಾಚಿನ್‌ ಪ್ರದೇಶದಲ್ಲಿ ಆಚರಿಸಿದರೆ, ಭಾರತ-ಪಾಕ್‌ ಯುದ್ಧದ 50 ನೇ ವರ್ಷಾಚರಣೆಯನ್ನು 2015ರಲ್ಲಿ ಪಂಜಾಬ್‌ ಗಡಿಯಲ್ಲಿ ಸೈನಿಕರ ಜತೆ ಕಳೆದಿದ್ದರು. ಮರುವರ್ಷ ಹಿಮಾಚಲಪ್ರದೇಶದಲ್ಲಿ ಮತ್ತು 2017 ರಲ್ಲಿ ಜಮ್ಮು-ಕಾಶ್ಮೀರದಲ್ಲಿ ದೀಪಾವಳಿ ಆಚರಿಸಿದ್ದರು.