ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ರಾತ್ರಿ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ವಿವಿಧ ಸ್ಮಾರಕಗಳಿಗೆ ಭೇಟಿ ನೀಡಿ ಪುಷ್ಮನಮನ ಸಲ್ಲಿಸಿದರು. 

ನವದೆಹಲಿ[ಮೇ.30]: ಮೋದಿ ಮೇ. 30 ಸಂಜೆ 7 ಗಂಟೆಗೆ ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್‍ಘಾಟ್‍ನ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಮಾಧಿ ಬಳಿ ತೆರಳಿ ಮಹಾನ್ ಚೇತನಗಳಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕೆಲ ಸಂಸದರು ಹಾಜರಿದ್ದರು. 

Scroll to load tweet…
Scroll to load tweet…

ನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ನರೇಂದ್ರ ಮೋದಿ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್.ಕೆ.ಎಸ್.ಬದೌರಿಯಾ ಹಾಜರಿದ್ದರು.

Scroll to load tweet…

ಅರವತ್ತೆಂಟು ವರ್ಷದ ನರೇಂದ್ರ ಮೋದಿಯವರು ಎರಡನೇ ಬಾರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ದೇಶ-ವಿದೇಶಗಳ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.