ಬಿಜೆಪಿ ನೇತೃತ್ವದ NDA ಒಕ್ಕೂಟಕ್ಕೆ ಮತ್ತೆರಡು ಪಕ್ಷಗಳು..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 11, Jan 2019, 11:27 AM IST
PM Narendra Modi says BJP open to alliances old friends
Highlights

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ಪಕ್ಷಗಳು ಭರದಿಂದ ಸಿದ್ಧತೆ ನಡೆಸುತ್ತಿವೆ. ಇದೇ ವೇಳೆ ಪ್ರಧಾನಿ ಮೋದಿ ಹಳೆಯ ದೋಸ್ತಿಗಳನ್ನು ಮತ್ತೆ ತಮ್ಮ ಒಕ್ಕೂಟಕ್ಕೆ ಆಹ್ವಾನಿಸಿದ್ದಾರೆ. 

ಚೆನ್ನೈ : 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಮೈತ್ರಿಕೂಟದ ಹಳೇ ದೋಸ್ತಿ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಕ್ಕೆ ಮುಂದಾಗಿದ್ದಾರೆ. 

ತಮಿಳುನಾಡಿನ 5 ಜಿಲ್ಲೆಗಳ ಬೂತ್‌ ಹಂತದ ಕಾರ್ಯಕರ್ತರ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಗುರುವಾರ ಸಂವಾದ ನಡೆಸಿದ ಮೋದಿ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಬಾಗಿಲುಗಳು ಎಲ್ಲ ಪ್ರಾದೇಶಿಕ ಪಕ್ಷಗಳಿಗೂ ಮುಕ್ತವಾಗಿದೆ ಎಂದು ಹೇಳಿದ್ದಾರೆ. 

ಈ ಮೂಲಕ ಮೋದಿ ಅವರು, ತಮಿಳುನಾಡು ಆಡಳಿತಾರೂಢ ಎಐಎಡಿಎಂಕೆ ಮತ್ತು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರನ್ನು ಪರೋಕ್ಷವಾಗಿ ಎನ್‌ಡಿಎಗೆ ಆಹ್ವಾನಿಸಿದ್ದಾರೆ ಎನ್ನಲಾಗುತ್ತಿದೆ. 

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಡಿಎಂಡಿಕೆ, ಪಿಎಂಕೆ ಮತ್ತ ವೈಕೋ ನೇತೃತ್ವದ ಎಂಡಿಎಂಕೆ ಸೇರಿದಂತೆ ಒಟ್ಟು 6 ಪಕ್ಷಗಳ ಎನ್‌ಡಿಎ ಮೈತ್ರಿಕೂಟವು ತಮಿಳುನಾಡಿನ 39 ಕ್ಷೇತ್ರಗಳ ಪೈಕಿ 2 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

loader