ಕರ್ನಾಟಕದ ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಪರಿಹಾರ ಕಾರ್ಯ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. 

ನವದೆಹಲಿ[ಆ.19]: ನಿಮ್ಮ ಜೊತೆ ನಾವಿದ್ದೇವೆ. ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಓದಿ: ಕರ್ನಾಟಕದ ಜನತೆ ನಿಮ್ಮ ಜೊತೆ : ಸಂತ್ರಸ್ತರಿಗೆ ಯಶ್ ನೆರವಿನ ಹಸ್ತ

ಕರ್ನಾಟಕದ ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿರುವುದಾಗಿ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಪರಿಹಾರ ಕಾರ್ಯ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರ ಸಹಕಾರ ನೀಡಲಿದೆ. ನೆರೆಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ಸುರಕ್ಷತೆಗೆ ಪ್ರಾರ್ಥಿಸುವುದಾಗಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

[ಸಾಂದರ್ಭಿಕ ಚಿತ್ರ]

Scroll to load tweet…