ಕಾನ್ಪುರ (ಮಾ. 09):  ದೇಶದಲ್ಲಿ ಒಗ್ಗಟ್ಟು ಕಾಪಾಡಿಕೊಂಡು ಹೋಗಬೇಕಾಗಿದೆ. ಆದರೆ ಕೆಲವು ರಾಜ್ಯಗಳಲ್ಲಿ ಕಾಶ್ಮೀರಿಗಳ ಮೇಲೆ ದಾಳಿ ನಡೆದಿರುವ ಘಟನೆಗಳ ಬಗ್ಗೆ ಮಾಹಿತಿ ಇದೆ.  ಒಂದೊಮ್ಮೆ ಕಾಶ್ಮೀರಿಗಳ ಮೇಲೆ ಯಾವುದೇ ರೀತಿಯ ದಾಳಿ ನಡೆದರೂ ಅಂಥವರ ವಿರುದ್ಧ ಆಯಾ ರಾಜ್ಯ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇತ್ತೀಚೆಗೆ ಲಖನೌನಲ್ಲಿ ಒಣಹಣ್ಣು ಮಾರಾಟ ಮಾಡುತ್ತಿದ್ದ ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಸೇರಿದಂತೆ ಇನ್ನೂ ಕೆಲ ರಾಜ್ಯಗಳಲ್ಲಿ ನಡೆದಿರುವ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ಲಖನೌ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶ ಸರ್ಕಾರ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.