ಇಂದು ಮೈಸೂರಿಗೆ ’ನಮೋ’ ಆಗಮನ; ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರಿಂದ ಭರ್ಜರಿ ಸಿದ್ಧತೆ

First Published 18, Feb 2018, 9:10 AM IST
PM Narendra Modi Will Come to Mysore Today
Highlights

ಇಂದು ಪ್ರಧಾನಿ ನರೇಂದ್ರ ಮೋದಿ  ಮೈಸೂರಿಗೆ ಆಗಮಿಸಲಿದ್ದಾರೆ. ರಾತ್ರಿ 11 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. 

ಮೈಸೂರು (ಫೆ.17): ಇಂದು ಪ್ರಧಾನಿ ನರೇಂದ್ರ ಮೋದಿ  ಮೈಸೂರಿಗೆ ಆಗಮಿಸಲಿದ್ದಾರೆ. ರಾತ್ರಿ 11 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. 

ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರ್ಯಾಡಿಸನ್ ಬ್ಲೂ ಹೋಟೆಲ್’ನಲ್ಲಿ ರಾತ್ರಿ ತಂಗಲಿದ್ದಾರೆ.  ಪ್ರಧಾನಿ ಆಗಮನ ವೇಳೆ ಭವ್ಯ ಸ್ವಾಗತಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.  ರಾತ್ರಿ ಪ್ರಧಾನಿ ಹಾದು ಹೋಗುವ ರಸ್ತೆಯಲ್ಲಿ ಐದು ಸಾವಿರಕ್ಕೂ ಹೆಚ್ಚು  ಕಾರ್ಯಕರ್ತರನ್ನ ನಿಲ್ಲಿಸಿ ಬಿಜೆಪಿ ಬಾವುಟ ತೋರಿಸಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದೆ.  ನಾಳೆ ಬೆಳಗ್ಗೆ ಶ್ರವಣ ಬೆಳಗೊಳಕ್ಕೆ ತೆರಳಿ ಮಹಾಮಸ್ತಕಾಭಿಷೇಕದಲ್ಲಿ ಭಾಗಿಯಾಗಿ ಮಧ್ಯಾಹ್ನ ಮೈಸೂರಿಗೆ ವಾಪಸ್ಸಾಗಲಿದ್ದಾರೆ. 

ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಬೃಹತ್ ರ್ಯಾಲಿ ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಸಿಎಂ ತವರಿನಲ್ಲೇ ಸರ್ಕಾರದ ಭ್ರಷ್ಟಾಚಾರವನ್ನ ಎಳೆಎಳೆಯಾಗಿ ಬಿಚ್ಚಿಡಲಿದ್ದು ಸಿಎಂ‌ ಎಸೆದ ಸವಾಲು ಸ್ವೀಕರಿಸಿ ಮೈಸೂರಿಗೆ ಆಗಮಿಸುತ್ತಿದ್ದಾರೆ. 
 

loader