59ನೇ ವಸಂತಕ್ಕೆ ಕಾಲಿಟ್ಟ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಶುಭಾಶಯ ಸಲ್ಲಿಸಿದ್ದಾರೆ.

ಬೆಂಗಳೂರು, [ಡಿ.16] : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಇಂದು [ಭಾನುವಾರ] 59ನೇ ವಸಂತಕ್ಕೆ ಕಾಲಿಟ್ಟ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಶುಭಾಶಯ ಸಲ್ಲಿಸಿದ್ದಾರೆ. ದೀರ್ಘ ಕಾಲ ಆಯುರಾರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…

ಇನ್ನು ಕುಮಾರಸ್ವಾಮಿ ಅವರು ತಮ್ಮ 59ನೇ ಹುಟ್ಟುಹಬ್ಬದ ದಿನವನ್ನು ಕುಟುಂಬಕ್ಕಾಗಿ ಮೀಸಲಿಟ್ಟಿರುವ ಹೆಚ್​ಡಿಕೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

ಪತ್ನಿ ಅನಿತ ಕುಮಾರಸ್ವಾಮಿ ಹಾಗೂ ನಿಖಿಲ್​ ಜೊತೆ ಸರಳವಾಗಿ ಕೇಕ್​​​​​​ ಕಟ್​ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ್ರು. 

 ಅಲ್ದೇ ನಿಖಿಲ್​ ಅಪ್ಪನಿಗಾಗಿ ಸೂಪರ್ ಗಿಫ್ಟ್​ ನೀಡಿದ್ದಾರೆ. ತಮ್ಮ ಮುಂದಿನ ಸಿನಿಮಾ ಸೀತಾರಾಮ ಕಲ್ಯಾಣ ಲಿರಿಕಲ್​​ ಸಾಂಗ್​ ರಿಲೀಸ್ ಮಾಡಿ, ವಿಶ್ ಮಾಡಿದ್ದಾರೆ.