ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಒಟ್ಟು 9 ಮಂದಿ ನೂತನ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನವದೆಹಲಿ(ಸೆ.03): ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಒಟ್ಟು 9 ಮಂದಿ ನೂತನ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್'ನಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಈ ವೇಳೆ ರಾಜ್ಯಸಚಿವರಾದ ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮುಕ್ತಾರ್ ಅಬ್ಬಾಸ್ ನಖ್ವಿ, ಪಿಯೂಷ್ ಗೋಯಲ್, ನರೇಂದ್ರ ಸಿಂಗ್ ತೋಮರ್ ಹಾಗೂ ರವಿಶಂಕರ್ ಪ್ರಸಾದ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಸುಮಿತ್ರಾ ಮಹಾಜನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿದಂತೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಸೇರಿದಂತೆ ಹಲವು ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು. ಅಲ್ಲದೆ ಭಾರತೀಯ ಸೇನೆಯ ಮೂರು ದಳಗಳ ಮುಖ್ಯಸ್ಥರೂ ಹಾಜರಿದ್ದರು.
