ತಿರುವನಂತಪುರ[ಆ.18]  ಕೇರಳದಲ್ಲಿ ಕಳೆದ ಒಂಭತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸಿದ ಬಳಿಕ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಿದ್ದಾರೆ.

ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳ ಪೈಕಿ ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳ ಕೆಲ ಭಾಗಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹವಾಮಾನ ವೈಪರಿತ್ಯದಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕೇರಳದಲ್ಲಿ 400ಲ್ಲೀ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ದೇಶದ ಹಲವು  ಭಾಗಗಳಿಂದ ಪರಿಹಾರ ಹರಿದು ಬರುತ್ತಿದ್ದು ಸೇನಾ ಪಡೆಗಳು ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.