ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 11400 ಕೋಟಿ ರು.ಹಗರಣ ಪ್ರಕರಣ ಸಂಬಂಧ ಎಸ್‌ಐಟಿಯಿಂದ ಸ್ವತಂತ್ರ ತನಿಖೆ ನಡೆಸುವುದಕ್ಕೆ ಕೇಂದ್ರ ಸರ್ಕಾರ ತನ್ನ ಆಕ್ಷೇಪ ವ್ಯಕ್ತಪಡಿಸಿದೆ.

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 11400 ಕೋಟಿ ರು.ಹಗರಣ ಪ್ರಕರಣ ಸಂಬಂಧ ಎಸ್‌ಐಟಿಯಿಂದ ಸ್ವತಂತ್ರ ತನಿಖೆ ನಡೆಸುವುದಕ್ಕೆ ಕೇಂದ್ರ ಸರ್ಕಾರ ತನ್ನ ಆಕ್ಷೇಪ ವ್ಯಕ್ತಪಡಿಸಿದೆ.

ಹಗರಣ ಕುರಿತು ಎಸ್‌ಐಟಿ ತನಿಖೆ ನಡೆಸಬೇಕು ಮತ್ತು ಆಭರಣ ಉದ್ಯಮಿ ನೀರವ್‌ ಮೋದಿ ಗಡಿಪಾರು ನಡೆಸುವಂತೆ ವಿನಂತಿಸಿ ವಕೀಲ ವಿನೀತ್‌ ಧಂಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರದ ಪರವಾಗಿ ಹಾಜರಾಗಿದ್ದ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌, ಪ್ರಕರಣದ ಕುರಿತು ಈಗಾಗಲೇ ವಿವಿಧ ತನಿಖಾ ಸಂಸ್ಥೆಗಳು ಕೇಸು ದಾಖಲಿಸಿ, ತನಿಖೆ ನಡೆಸುತ್ತಿವೆ.

ಈ ಹಂತದಲ್ಲಿ ಮತ್ತೊಂದು ತನಿಖೆಯ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು. ವಾದ ಆಲಿಸಿದ ಸಿಜೆಐ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ, ಮುಂದಿನ ವಿಚಾರಣೆ ಮಾ. 16ಕ್ಕೆ ನಿಗದಿಪಡಿಸಿತು.