Asianet Suvarna News Asianet Suvarna News

ಅರುಣಾಚಲ ಪ್ರದೇಶದಲ್ಲಿ ಸೇನೆ ವರ್ಸಸ್ ಆರ್ಮಿ!

ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರ ನಡುವೆ ವೈಮನಸ್ಸು ಸ್ಫೋಟಗೊಂಡಿದೆ. ಸಾರ್ವಜನಿಕರು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಸೈನಿಕರ ಬಂಧನದ ಕುರಿತಂತೆ ಸೇನೆ ಮತತ್ತು ಪೊಲೀಸ್ ಇಲಾಖೆ ನಡುವೆ ಭಿನ್ನಮತ ಕಾಣಿಸಿಕೊಂಡಿದೆ.

Police and Army Scuffle in Arunachal Pradesh
Author
Bengaluru, First Published Nov 8, 2018, 5:59 PM IST

ಟಾನಗರ(ನ.8): ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರ ನಡುವೆ ವೈಮನಸ್ಸು ಸ್ಫೋಟಗೊಂಡಿದೆ. ಸಾರ್ವಜನಿಕರು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಸೈನಿಕರ ಬಂಧನದ ಕುರಿತಂತೆ ಸೇನೆ ಮತತ್ತು ಪೊಲೀಸ್ ಇಲಾಖೆ ನಡುವೆ ಭಿನ್ನಮತ ಕಾಣಿಸಿಕೊಂಡಿದೆ.

ಇಲ್ಲಿನ ಬೋಮಿಡ್ಲಾ ನಗರದಲ್ಲಿ ಆಯೋಜಿಸಲಾಗಿದ್ದ ಬುದ್ಧ ಮಹೋತ್ಸವದ ವೇಳೆ ಭಾರತೀಯ ಸೇನೆಯ ಇಬ್ಬರು ಸೈನಿಕರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೂ ಕೂಡ ಸೈನಿಕರು ಮುಂದಾಗಿದ್ದರು ಎಂದು ಆರೋಪಿಸಲಾಗಿದೆ.

ಸೈನಿಕರ ಅಸಭ್ಯ ವರ್ತನೆಯಿಂದ ಕೆರಳಿದ ಪೊಲೀಸರು ಮತ್ತು ಸಾರ್ವಜನಿಕರು ಇಬ್ಬರೂ ಸೈನಿಕರನ್ನು ಮನಬಂದಂತೆ ಥಳಿಸಿ, ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ನಂತರ ಇಬ್ಬರೂ ಸೈನಿಕರ ವೈದ್ಯಕೀಯ ತಪಾಸಣೆ ನಡೆಸಲಾಗಿ ಇಬ್ಬರೂ ಮದ್ಯ ಸೇವಿಸಿದ್ದು ಖಚಿತವಾಗಿತ್ತು.

ಆದರೆ ಘಟನೆಯನ್ನು ನಿರಾಕರಿಸಿದ್ದ ಬಟಾಲಿಯನ್ ಕಮಾಂಡಿಂಗ್ ಆಫೀಸರ್ ಪೊಲೀಸರು ಉದ್ದೇಶಪೂರ್ವಕವಾಗಿ ಸೈನಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಈ ಆರೋಪವನ್ನು ಅಲ್ಲಗಳೆದಿರುವ ಪೊಲೀಸರು ಸೈನಿಕ ಅಸಭ್ಯ ವರ್ತನೆ ಕುರಿತು ಸಾಕ್ಷ್ಯಾಧಾರ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow Us:
Download App:
  • android
  • ios