ಬೆಂಗಳೂರು (ಸೆ.21): ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಾಂಧಿನಗರದ ಕರವೇ ಕಚೇರಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಕಾರ್ಯಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಏಕರೂಪ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದರು.